ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ – ಸಿಎಂ

ಸಮಗ್ರ ನ್ಯೂಸ್: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆಯಿದ್ದು, ಇದನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

Ad Widget . Ad Widget . Ad Widget . Ad Widget . Ad Widget . Ad Widget .

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಡಿಕೇರಿಯಲ್ಲಿ ಅರೆಭಾಷೆ ಗೌಡರಿಗೆ ಜಮೀನು ಕೊಡುವ ವಿಚಾರ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿಟ್ಟು ನಿಮ್ಮ ಬೇಡಿಕೆ ಈಡೇರಿಸುತ್ತೇವೆ ಎಂದರು.

ಭಾಗಮಂಡಲದಲ್ಲಿ ನಾಡಗೌಡ ಸಮುದಾಯ ಭವನಕ್ಕೆ 1 ಕೋಟಿ ರೂ. ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ 50 ಲಕ್ಷ ರೂ. ಬೇಡಿಕೆಯನ್ನು ಕೇಳಿದ್ದು, ಅದನ್ನು ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಸಿಎಂ ಆಶ್ವಾಸನೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ಡಾ.ಮಂತರ್‌ ಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯತ್ರಿ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಅರೆಭಾಷೆಯಲ್ಲಿ ಸಾಧನೆ ಮಾಡಿದ ಕೆ.ಆರ್.ಗಂಗಾಧರ (ಅರೆಭಾಷೆ ಸಾಹಿತ್ಯ ಹಾಗೂ ಶೈಕ್ಷಣಿಕ ), ಯು.ಪಿ.ಶಿವಾನಂದ (ಸಾಹಿತ್ಯ ಮತ್ತು ಪತ್ರಿಕೋದ್ಯಮ), ಡಿ.ಎಸ್.ಆನಂದ (ಅರೆಭಾಷಿಕರ ಸಂಘಟನೆ ಮತ್ತು ಆಡಳಿತ) ಅವರಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

Leave a Comment

Your email address will not be published. Required fields are marked *