ಆಂದ್ರಪ್ರದೇಶ: ಕಣಿವೆಗೆ ಉರುಳಿದ ಬಸ್| ಕನಿಷ್ಠ 22 ಮಂದಿ ಸಾವು

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಬಸ್‌ವೊಂದು ಕಣಿವೆಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿದ್ದು, 22 ಜನರು ಗಾಯಗೊಂಡಿದ್ದಾರೆ.

Ad Widget ... .. Ad Widget .

ಚಿತ್ತೂರಿನಿಂದ ತೆಲಂಗಾಣಕ್ಕೆ ತೆರಳುತ್ತಿದ್ದ ಬಸ್ ಮೋತುಗುಡೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆಗೆ ಉರುಳಿಬಿದ್ದಿದೆ. ಬಸ್‌ನಲ್ಲಿ ಚಾಲಕ ಮತ್ತು ಕ್ಲೀನರ್ ಸೇರಿದಂತೆ 37 ಜನರು ಪ್ರಯಾಣಿಸುತ್ತಿದ್ದರು. ದಟ್ಟ ಮಂಜು ಆವರಿಸಿದ್ದರಿಂದ ಚಾಲಕನಿಗೆ ತಿರುವು ಕಾಣಿಸದೆ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗಿದೆ.

Ad Widget

ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ಮಾಹಿತಿ ನೀಡಿದ್ದು, ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯ ದುರ್ಗಾ ದೇವಸ್ಥಾನದ ಬಳಿ ಬೆಳಿಗ್ಗೆ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 9 ಜನರು ಮೃತಪಟ್ಟಿದ್ದಾರೆ ಮತ್ತು 22 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಪ್ರಯಾಣಿಕರು ಚಿತ್ತೂರಿನಿಂದ ತೆಲಂಗಾಣದ ಭದ್ರಾಚಲಂನಲ್ಲಿರುವ ಶ್ರೀ ರಾಮ ದೇವಸ್ಥಾನಕ್ಕೆ ಹೋಗುತ್ತಿದ್ದರು ಎಂದು ಅಮಿತ್ ಬರ್ದಾರ್ ಹೇಳಿದ್ದಾರೆ.

Leave a Comment

Your email address will not be published. Required fields are marked *