ಸುರತ್ಕಲ್: ಸಹೋದರಿಯನ್ನೇ ಅತ್ಯಾಚಾರಗೈದ ಸಹೋದರ| ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಕರಾವಳಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸೋದರನೇ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ನಡೆದಿದೆ.

Ad Widget ... .. Ad Widget .

ಕುಳಾಯಿ ನಿವಾಸಿ ವಿಠಲ ಕುಂಬಾರ ಎಂಬ ಆರೋಪಿಯು ದೊಡ್ಡಪ್ಪನ ಮಗಳನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದಾಗ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದಾನೆ.

Ad Widget

ಈ ವಿಚಾರವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *