IPL ಹರಾಜು ಪ್ರಕ್ರಿಯೆ| ಬರೋಬ್ಬರಿ 25.2 ಕೋಟಿಗೆ ಗ್ರೀನ್ ಖರೀದಿಸಿದ KKR

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಬರೋಬ್ಬರಿ 25.20 ಕೋಟಿ ರೂ.ಗೆ ಹರಾಜಾಗಿದ್ದಾರೆ. ಹೀಗೆ ಆಸೀಸ್ ಆಟಗಾರನಿಗೆ ಕೋಟಿ ಮೊತ್ತ ನೀಡಿ ಖರೀದಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ.

Ad Widget ... ..

ಕೆಕೆಆರ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಈಗಾಗಲೇ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಅವರ ಬದಲಿಗೆ  ಗ್ರೀನ್ ಅವರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿತ್ತು. ಆದರೆ ಅತ್ತ ಕೆಕೆಆರ್​ ಫ್ರಾಂಚೈಸಿಗೆ ಸಿಎಸ್​ಕೆ ಕಡೆಯಿಂದ ಭರ್ಜರಿ ಪೈಪೋಟಿ ಎದುರಾಗಿತ್ತು.

Ad Widget

ಇದಾಗ್ಯೂ ಅಂತಿಮವಾಗಿ ಬರೋಬ್ಬರಿ 25.20 ಕೋಟಿ ರೂ. ನೀಡುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಕ್ಯಾಮರೋನ್ ಗ್ರೀನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅದರಂತೆ ಗ್ರೀನ್ ಮುಂಬರುವ ಐಪಿಎಲ್​ನಲ್ಲಿ ಕೆಕೆಆರ್ ಪರ ಕಣಕ್ಕಿಳಿಯಲಿದ್ದಾರೆ.

ಕ್ಯಾಮರೋನ್ ಗ್ರೀನ್ ಈ ಹಿಂದೆ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಗ್ರೀನ್, 2024 ರಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದರು. ಇದೀಗ ಮೂರನೇ ತಂಡವಾಗಿ ಕೆಕೆಆರ್ ಪರ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

Leave a Comment

Your email address will not be published. Required fields are marked *