ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ. ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು ಸತ್ತವರ ಖಾತೆಗೂ ಗೃಹಲಕ್ಷ್ಮೀ ಯೋಜನೆ ಹಣ ಸಂದಾಯ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಸಿಎಸ್ ನೇತೃತ್ವದಲ್ಲಿ ಎರಡು ಬಾರಿ ಸಭೆ ಮಾಡಲಾಗಿದೆ. ಸತ್ತವರ ಅಕೌಂಟ್ಗೆ ಹಣ ಸಂದಾಯವಾದರೆ ತಕ್ಷಣ ಗೊತ್ತಾಗಲ್ಲ. ಈಗ ಸಾಫ್ಟ್ವೇರ್ ಅಭಿವೃದ್ಧಿ ಅಳವಡಿಕೆ ಮಾಡಿದ್ದೇವೆ. ಮರಣ ಪ್ರಮಾಣ ಪತ್ರಗಳನ್ನು ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡುತ್ತಾರೆ. ಹೀಗಾಗಿ ಅದನ್ನ ಸದ್ಯಕ್ಕೆ ತಡೆಹಿಡಿದಿದ್ದೇವೆ. ತಪ್ಪಾಗಿ ಸಂದಾಯವಾಗಿರುವ ಹಣವನ್ನು ವಾಪಸ್ ಪಡೆಯುವ ಹೊಣೆಗಾರಿಕೆಯನ್ನು ಕೆಲ ಬ್ಯಾಂಕ್ಗೆ ಸೂಚನೆ ಕೊಟ್ಟಿದ್ದೇವೆ. ಸಿಎಸ್ ಬ್ಯಾಂಕ್ಗೆ ನೋಟಿಸ್ ಕೊಟ್ಟಿದ್ದಾರೆ, ಲೇಟರ್ ಬರೆದಿದ್ದಾರೆ ಎಂದರು.







