ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನಗೊಂಡು, DCM ‘ಅಜಿತ್ ಪವಾರ್’ ಸೇರಿ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ.ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ (ಹೆಲಿಕಾಪ್ಟರ್) ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಭಾರಿ ಪ್ರಮಾಣದ ಬೆಂಕಿ ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮುಂಬೈನಿಂದ ವಿಮಾನ ಹಾರಿದ ಒಂದು ಗಂಟೆಯ ನಂತರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲು ಎನ್‌ಸಿಪಿ ಮುಖ್ಯಸ್ಥರು ಬಾರಾಮತಿಗೆ ಪ್ರಯಾಣಿಸಬೇಕಿತ್ತು. ಗಾಯಾಳುಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಮುಂಬೈನಿಂದ ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೊರಟ ಈ ಲಘು ವಿಮಾನ, ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಪ್ರಯತ್ನದ ಸಮಯದಲ್ಲಿ ಅಪಘಾತಕ್ಕೀಡಾಯಿತು. ವರದಿಗಳ ಪ್ರಕಾರ, ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಂಚಿತವಾಗಿ ಪವಾರ್ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು.






