ಸಮಗ್ರ ನ್ಯೂಸ್: ಕಳೆದ ವರ್ಷದ ಅಹಮದಾಬಾದ್‌ನಲ್ಲಿ ನಡೆದಿದ್ದ ವಿಮಾನ ಅಪಘಾತದ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಸೋಮವಾರ ಲಂಡನ್‌ನಿಂದ ಬೆಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷ ಕಂಡುಬಂದಿದೆ ಎಂದು ವರದಿಯಾಗಿದೆ.
ಏರ್ ಇಂಡಿಯಾ ಬೋಯಿಂಗ್ 787-8 ವಿಮಾನದ ತಪಾಸಣೆ ವೇಳೆ ದೋಷ ಕಂಡುಬಂದಿದೆ. ಕೂಡಲೇ ಹಾರಾಟವನ್ನು ರದ್ದುಪಡಿಸಲಾಯಿತು ಮೂಲಗಳು ತಿಳಿಸಿವೆ.
ನಮ್ಮ ಪೈಲಟ್ ಒಬ್ಬರು ಬೋಯಿಂಗ್ 787-8 ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಂಭವನೀಯ ದೋಷವನ್ನು ವರದಿ ಮಾಡಿದ್ದಾರೆ. ಮಾಹಿತಿ ಸಿಕ್ಕ ಕೂಡಲೇ ವಿಮಾನವನ್ನು ರದ್ದುಪಡಿಸಿದ್ದೇವೆ ಮತ್ತು ಪೈಲಟ್‌ನ ಕಳವಳಗಳನ್ನು ಆದ್ಯತೆಯ ಮೇಲೆ ಪರಿಶೀಲಿಸುತ್ತಿದ್ದೇವೆ. ಈ ವಿಷಯವನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಗಮನಕ್ಕೂ ತಂದಿದ್ದೇವೆ’ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
‘ಡಿಜಿಸಿಎ ನಿರ್ದೇಶನದಂತೆ ಎಲ್ಲಾ ಬೋಯಿಂಗ್ 787 ವಿಮಾನಗಳಲ್ಲಿನ ಇಂಧನ ನಿಯಂತ್ರಣ ಸ್ವಿಚ್‌ಗಳನ್ನು ಪರಿಶೀಲನೆ ನಡೆಸಿದ್ದು, ಯಾವುದೇ ಸಮಸ್ಯೆ ಕಂಡುಬಂದಿಲ್ಲ’ ಎಂದೂ ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ.







