ಸಮಗ್ರ ನ್ಯೂಸ್: ಬಂಟ್ವಾಳದ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಸಾಂಪ್ರದಾಯಿಕ ಕೋಳಿ ಅಂಕ ನಿಲ್ಲಿಸಲು ಬಂದಿದ್ದ ಪೊಲೀಸರ ಮೇಲೆ ಆಕ್ರೋಶ ವ್ಯಕ್ತಪಡಿಸಿ ಕೋಳಿ ಅಂಕ ನಡೆಯುವಂತೆ ಮಾಡಿದ್ದ ಪುತ್ತೂರು ಶಾಸಕರ ಮೇಲೆ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಗೆ ಹೈಕೋರ್ಟ್ ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಪೋಲೀಸರಿಗೆ ಸೂಚನೆಯನ್ನು ನೀಡಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೇಪು ಉಳ್ಳಾಲ್ತಿ ದೈವಸ್ಥಾನದಲ್ಲಿ ಡಿಸೆಂಬರ್ 20, 2025 ರಂದು ಕಾನೂನುಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭದಲ್ಲಿ ವಿಟ್ಲ ಪೋಲೀಸರು ಕೋಳಿ ಅಂಕವನ್ನು ತಡೆಯಲು ಮುಂದಾಗಿದ್ದರು. ಈ ವೇಳೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೋಳಿ ಅಂಕವನ್ನು ನಡೆಸಲು ಹೇಳಿದ್ದರು, ಅಲ್ಲದೆ ಪೊಲೀಸರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನಲೆ ವಿಟ್ಲ ಪೋಲೀಸರು ಅಶೋಕ್ ಕುಮಾರ್ ರೈ ವಿರುದ್ಧ ಪ್ರಕರಣ ದಾಖಲಿಸಿದ್ದರು. ಶಾಸಕ ಸೇರಿದಂತೆ 16 ಜನರ ವಿರುದ್ಧ ಬಿಎನ್‌ಎಸ್ ಕಲಂ 189(2), 49,221,223,190 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಪೋಲೀಸ್ ಪ್ರಕರಣವನ್ನು ಶಾಸಕರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಹಿನ್ನಲೆಯಲ್ಲಿ ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಪೋಲೀಸರಿಗೆ ಸೂಚನೆಯನ್ನು ನೀಡಿದೆ.






