ಸಮಗ್ರ ನ್ಯೂಸ್: ವಿಜಯಪುರದಲ್ಲಿ ರೆಡ್ ಬರ್ಡ್ ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಖಾಸಗಿ ಜೆಟ್ ಪತನವಾಗಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ.
ರೆಡ್ ಬರ್ಡ್ ಜೆಟ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ೧೦೮ ಆಂಬುಲೆನ್ಸ್ ಗೆ ಕರೆ ಮಾಡಿದ್ದು ಆ ಮೂಲಕ ಗಾಯಲುಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಮಂಗಳೂರು ಗ್ರಾಮದ ಬಳಿ ಇಂದು ರೆಡ್ ಬರ್ಡ್ ಖಾಸಗಿ ಜೆಟ್ ಪತನವಾಗಿದೆ.
ರೆಡ್ ಬರ್ಡ್ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜೆಟ್‌ನಲ್ಲಿದ್ದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರೆಡ್ ಬರ್ಡ ಎವಿಯೇಷನ್ ಎಂಬ ವಿಮಾನ ತರಬೇತಿ ಸಂಸ್ಥೆ ಉಪಯೋಗಿಸುತ್ತಿದ್ದ ಸೆಸ್ನಾ 172 ಟ್ಯಾಂಗೋ ಚಾರ್ಲಿ ಲಘು ವಿಮಾನದಲ್ಲಿ ಕ್ಯಾಪ್ಟನ್ ಕುನಾಲ್ ಮಲ್ಹೋತ್ತಾ ಹಾಗೂ ತರಬೇತಿ ನಿರತ ಪೈಲಟ್ ಕುನಾಲ್ ಶಂಕರ್ ಇದ್ದರು. ಆದ್ರೆ, ಘಟನೆಯಲ್ಲಿ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಘಟನೆಗೆ ಏನು ಕಾರಣ ಎನ್ನುವುದು ತಿಳಿದುಬರಬೇಕಿದೆ.







