Ad Widget .

ರಾಷ್ಟ್ರೀಯ ಶಿಕ್ಷಣ ‌ನೀತಿಗೆ ವಿರೋಧ|ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಗೆ ಮಂಗಳೂರಿನಲ್ಲಿ ಮುಖಭಂಗ|ಹೊಸ ಶಿಕ್ಷಣ ನೀತಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ಘೇರಾವ್|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget .

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಸಿಎಫ್‌ಐ ಕಾರ್ಯಕರ್ತರು ಮಂಗಳೂರು ಕೋಣಾಜೆ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಉದ್ಘಾಟನಾ ಕಾರ್ಯಕ್ರಮಕ್ಕೆ ಬಂದಿದ್ದ ಉನ್ನತ ಶಿಕ್ಷಣ ಸಚಿವರಿಗೆ ಕಾರ್ಯಕ್ರಮದಲ್ಲಿ ತೀವ್ರ ಮುಖಭಂಗವಾಗಿದ್ದು, ಸಮಾರಂಭಕ್ಕೆ ಪ್ರತಿಭಟನಾಕಾರರು ಘೇರಾವ್ ಕೂಗಿದ್ದಾರೆ.

ಮಂಗಳಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ನಡೆಸಿರುವ ಸಿಎಫ್ ಐ ಕಾರ್ಯಕರ್ತರು ನೂತನ ನೀತಿಯಲ್ಲಿ ಮಧ್ಯಯುಗ ಇತಿಹಾಸ ತೆಗೆದು ಹಾಕಲಾಗಿರುವ ನೀತಿ ಖಂಡಿಸಿದ್ದಾರೆ.

ಪ್ರಾಚೀನ ಹಾಗೂ ಈಗಿನ ಇತಿಹಾಸವನ್ನು ಕಲಿಸಲಾಗುತ್ತಿದೆ. ಪ್ರಾಚೀನ ಯುಗದ ಇತಿಹಾಸದಲ್ಲಿ ಮೌಢ್ಯತೆ ತುಂಬಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಸಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದಿದ್ದಾರೆ.

Leave a Comment

Your email address will not be published. Required fields are marked *