ಮೂರ್ನಾಡು: ಶ್ರೀ ವೆಂಕಟರಮಣ ಸೊಸೈಟಿ ನೂತನ 24ನೇ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಬ್ಯಾಂಕಿಂಗ್ ಮಾತ್ರವಲ್ಲದೆ ಶಿಕ್ಷಣ, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ವೆಂಕಟರಮಣ ಸೊಸೈಟಿಯ ಬದ್ಧತೆ ಅಭಿನಂದನಾರ್ಹ. ಈ ಸಹಕಾರ ಸಂಘದ ಆಡಳಿತ ಮಂಡಳಿಯು ಸಮಾಜದಲ್ಲಿ ಉತ್ತಮ ಕಾರ್ಯಮುಖೇನ ಜನಪ್ರಿಯವಾಗಿದೆ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹೇಳಿದರು.

Ad Widget ... ..

ಅವರು ಮೂರ್ನಾಡಿನಲ್ಲಿ ನಡೆದ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಇದರ 24ನೇ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

Ad Widget

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸದಾನಂದ ಕೆ.ಸಿ ವಹಿಸಿದ್ದರು. ನೂತನ ಶಾಖೆಯನ್ನು ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಉದ್ಘಾಟಿಸಿದರು. ಭದ್ರತಾ ಕೊಠಡಿಯನ್ನು ಆನಂದ ಕರಂದ್ಲಾಜೆ, ಗಣಕೀಕರಣವನ್ನು ಮೂರ್ನಾಡು ವರ್ತಕರ ಸಂಘದ ಅಧ್ಯಕ್ಷ ಅರುಣ್ ಅಪ್ಪಚ್ಚು ಬಡವಂಡ ಉದ್ಘಾಟಿಸಿದರು.

ಶಾಖೆಯ ಪ್ರಥಮ ಠೇವಣಿ ಪತ್ರವನ್ನು ಕೊಡಗು ಚೇಂಬರ್ ಆಫ್ ಕಾಮರ್ಸ್ ನ ಉಪಾಧ್ಯಕ್ಷ ನವೀನ್ ಅಂಬೆಕಲ್ಲು, ಪ್ರಥಮ ಪಾಲುಪತ್ರವನ್ನು ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ ಹರೀಶ್, ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಅರುಣ್ ಅಪ್ಪಚ್ಚು ಬಡವಂಡ ವಿತರಿಸಿದರು.

ಸಭೆಯಲ್ಲಿ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್ ಗಂಗಾಧರ, ವೆಂಕಟರಮಣ ಸೊಸೈಟಿಯ ಪೂರ್ವಾಧ್ಯಕ್ಷರುಗಳಾದ ಪಿ.ಸಿ ಜಯರಾಮ, ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಚಂದ್ರ ಕೋಲ್ಚಾರ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಉಪಸ್ಥಿತರಿದ್ದರು.

ಸಭೆಯಲ್ಲಿ ‌ವೆಂಕಟೇಶ್ವರ ಕಾಂಪ್ಲೆಕ್ಸ್ ಮಾಲಕ ಕುಂತೋಡಿರ ದೇವಯ್ಯ, ಹಾಗೂ ಉದ್ಯಮಿ ವಾಸುದೇವ ಪಟ್ರುಕೋಡಿಯವರನ್ನು ಗೌರವಿಸಲಾಯಿತು.

ಸಂಘದ ನಿರ್ದೇಶಕ ಸದಾನಂದ ಮಾವಜಿ ಸ್ವಾಗತಿಸಿ, ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ ಪ್ರಸ್ತಾವಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ ವಿಶ್ವನಾಥ ವಂದಿಸಿದರು. ಸಿಬ್ಬಂದಿಗಳಾದ ಗಿರೀಶ್ ಕಾಂತ್ ಹಾಗೂ ಆದರ್ಶ ಪ್ರಾರ್ಥಿಸಿದರು. ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ಎಂ. ಮತ್ತು ಸಿಬ್ಬಂದಿಗಳು ಸಹಕರಿಸಿದರು. ಕೃಷ್ಣ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *