ಸಾರಿಗೆ ಸಿಬ್ಬಂದಿಗಳ 26 ತಿಂಗಳ ಹಿಂಬಾಕಿ ನೀಡಲು ನಿರ್ಧಾರ

ಸಮಗ್ರ ನ್ಯೂಸ್: ಸಾರಿಗೆ ನಿಗಮಗಳ ಸಿಬ್ಬಂದಿಗೆ 26 ತಿಂಗಳ ವೇತನ ಹಿಂಬಾಕಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

Ad Widget ... ..

2024ರ ಜನವರಿ 1ರಿಂದ ಆಗಬೇಕಿದ್ದ ಪರಿಷ್ಕೃತ ವೇತನ ವಿಚಾರಕ್ಕೆ ಸಂಬಂಧಿಸಿದಂತೆ 2025ರ ಮಾರ್ಚ್ 1 ರಿಂದ ವೇತನ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಜಾರಿ ಮಾಡಲಾಗಿದೆ.

Ad Widget

ಸಾರಿಗೆ ನಿಗಮಗಳ ಸಿಬ್ಬಂದಿ ಒತ್ತಾಯಕ್ಕೆ ಸ್ಪಂದಿಸಿದ ಸರ್ಕಾರ ಸಾರಿಗೆ ನಿಗಮಗಳ ಸಿಬ್ಬಂದಿಗೆ 26 ತಿಂಗಳ ವೇತನ ಹಿಂಬಾಕಿ ನೀಡಲು ತೀರ್ಮಾನ ಕೈಗೊಂಡಿದೆ.

ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಇಂದು ಮಹತ್ವದ ಸಭೆ ನಡೆಸಲಾಗಿದೆ. ಸಾರಿಗೆ ಸಚಿವರು ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವೇತನ ಪರಿಷ್ಕರಣೆಗೆ ತೀರ್ಮಾನಿಸಿದೆ.

Leave a Comment

Your email address will not be published. Required fields are marked *