ಸಮಗ್ರ ನ್ಯೂಸ್: ವಾಯುಭಾರ ಕುಸಿತದ ಪರಿಣಾಮವಾಗಿ ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನ ಹಲವೆಡೆ ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ.
ಸುಳ್ಯ ತಾಲೂಕಿನ ಬಹುತೇಕ ಕಡೆ 20 ನಿಮಿಷಕ್ಕೂ ಹೆಚ್ಚು ಕಾಲ ಮಳೆಯಾಗಿದ್ದರೆ, ಕಡಬ, ಬೆಳ್ತಂಗಡಿ ತಾಲೂಕಿನ ಘಟ್ಟ ಪ್ರದೇಶಕ್ಕೆ ಹೊಂದಿಕೊಂಡಿರುವ ಭಾಗಗಳಲ್ಲಿ ವ್ಯಾಪಕ ಮಳೆಯಾದ ವರದಿಗಳು ಬಂದಿವೆ.
ಹಲವೆಡೆ ಒಣಹಾಕಿದ ಅಡಿಕೆ ಮಳೆಯಿಂದಾಗಿ ಒದ್ದೆಯಾಗಿದ್ದು, ಕೃಷಿಕರು ಕಂಗಾಲಾದರು.






