ಅಪ್ರಾಪ್ತರ ಮೇಲೆ ನೈತಿಕ ಪೊಲೀಸ್ ಗಿರಿ| ತಂದೆ – ಮಗ ಅರೆಸ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಸ್ಟೀವನ್ ಮೊಂತೆರೊ ಮತ್ತು ಆತನ ಮಗ ಅವಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget ... ..

ಫೆಬ್ರವರಿ 23ರಂದು ಸಂಜೆ 4 ಗಂಟೆ ಸುಮಾರಿಗೆ ಬಾಬುಗೆಡ್ಡೆಯ ಗ್ರಾಮ ಸಂಘದ ಬಳಿಯ ರೈಲ್ವೆ ಹಳಿಯಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ಆರೋಪಿಗಳು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸುತ್ತಾ ಅಲ್ಲಿಗೆ ಬಂದಿದ್ದಾರೆ. “ನೀವು ಇಲ್ಲಿ ಕಿಸ್ ಮಾಡುತ್ತಿದ್ದಿರಿ, ನಾನು ರೆಕಾರ್ಡಿಂಗ್ ಮಾಡುತ್ತಿದ್ದೇನೆ, ಫೇಸ್‌ಬುಕ್‌ನಲ್ಲಿ ಹಾಕುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.

Ad Widget

ವಿದ್ಯಾರ್ಥಿನಿ ಅಲ್ಲಿಂದ ತೆರಳಿದ ಬಳಿಕ ವಿದ್ಯಾರ್ಥಿಯನ್ನು ತಡೆದು ರೈಲ್ವೆ ಹಳಿಯಿಂದ ಪಕ್ಕದ ರಸ್ತೆಗೆ ಕರೆದುಕೊಂಡು ಹೋಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಮತ್ತೆ ಈ ಕಡೆ ಬಂದರೆ ಕೈಕಾಲು ಮುರಿಯುವುದಾಗಿ ಬೆದರಿಕೆ ಹಾಕಿರುವುದಲ್ಲದೆ, ಜಾತಿ ನಿಂದನೆ ಮಾಡಿ ವಿಡಿಯೋವನ್ನು ವಾಟ್ಸಾಪ್‌ನಲ್ಲಿ ವೈರಲ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ ಅವರು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *