Ad Widget .

ಉಡುಪಿ| ಚೂರಿ‌ ಇರಿತಕ್ಕೊಳಗಾದ ಯುವತಿ‌ ಸಾವು| ಜೀವನ್ಮರಣ ಸ್ಥಿತಿಯಲ್ಲಿ ಭಗ್ನ ಪ್ರೇಮಿ| ಘಟನೆ ನಡೆದಿದ್ದು ಯಾಕೆ? ಇಲ್ಲಿದೆ ಫುಲ್ ಡೀಟೈಲ್

ಉಡುಪಿ: ನಗರದ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯುವಕನೋರ್ವ ಯುವತಿಗೆ ಚೂರಿ ಇರಿತವನ್ನು ಮಾಡಿದ್ದು ಬಳಿಕ ತಾನು ಕೂಡ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಯುವತಿ ಮೃತಪಟ್ಟಿದ್ದಾಳೆ. ಯುವತಿಯನ್ನು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ‌ ನಡೆಸುತ್ತಿದ್ದಾನೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ ಹಾಗೂ ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ(26) ಕೊಲೆಯಾಗಿದ್ದು, ಕೃತ್ಯ ಎಸಗಿರುವ ಆರೋಪಿ ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Ad Widget . Ad Widget . Ad Widget .

ಸೌಮ್ಯಶ್ರೀ ಸಂತೆಕಟ್ಟೆಯ ರಾಷ್ಟ್ರೀಕೃತ ಬ್ಯಾಂಕಿನ ಆಧಾರ್ ಕಾರ್ಡ್ ಲಿಂಕ್ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರೆ, ಸಂದೇಶ್ ಕುಲಾಲ್ ಉಡುಪಿಯ ಐಡಿಯಲ್ ಮೆಡಿಕಲ್ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಾನೆ.

ಪ್ರೀತಿ ಕೊಂದ ಕೊಲೆಗಾರ

ಇವರಿಬ್ಬರು ಕಳೆದ ಏಳೆಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಸೌಮಶ್ರೀಯ ಸಹೋದರರಿಬ್ಬರು ವಿದೇಶದಲ್ಲಿದ್ದು, ತಂದೆ ಅನಾರೋಗ್ಯ ಪೀಡಿತರಾಗಿದ್ದಾರೆ. ಕೆಲ ದಿನಗಳ ಹಿಂದೆ ಸೌಮ್ಯಶ್ರೀಗೆ ಬೇರೆಯವರೊಂದಿಗೆ ನಿಶ್ಚಿತಾರ್ಥ ಆಗಿತ್ತೆಂದು ತಿಳಿದುಬಂದಿದೆ. ಇದರಿಂದ ಸಂದೇಶ ಕುಲಾಲ್ ಕುಪಿತಗೊಂಡಿದ್ದು, ಇದೇ ವಿಚಾರದಲ್ಲಿ ಇಬ್ಬರಿಗೂ ಜಗಳ ಆಗುತ್ತಿತ್ತು ಎಂದು ಪೊಲೀಸ್ ಮೂಲ ಗಳು ತಿಳಿಸಿವೆ.

ಇಂದು ಸಂಜೆ ಬ್ಯಾಂಕಿನಿಂದ ತನ್ನ ಸ್ಕೂಟಿಯಲ್ಲಿ ಮನೆಗೆ ವಾಪಾಸ್ಸು ಹೋಗುತ್ತಿದ್ದ ಸೌಮ್ಯಶ್ರೀಯನ್ನು ಬೈಕಿನಲ್ಲಿ ಬಂದ ಸಂದೇಶ್, ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು ನಿಲ್ಲಿಸಿದ್ದನು. ಆಗ ಅವರಿಬ್ಬರ ಮಧ್ಯೆ ವಾಗ್ವಾದ ನಡೆಯಿತು. ಈ ವೇಳೆ ಸಂದೇಶ್ ಕುಲಾಲ್, ತಾನು ತಂದಿದ್ದ ಚೂರಿಯಿಂದ ಸೌಮ್ಯಶ್ರೀಗೆ ಇರಿದ ಎನ್ನಲಾಗಿದೆ. ನಂತರ ಅದೇ ಚಾಕುವಿನಿಂದ ಆತ ತನ್ನ ಕುತ್ತಿಗೆ ಕೊಯ್ದುಕೊಂಡನು.

ತಕ್ಷಣ ಸ್ಥಳೀಯರು ಧಾವಿಸಿ ಇವರಿಬ್ಬರು ಆಸ್ಪತ್ರೆಗೆ ದಾಖಲಿಸಿದರು. ಗಂಭೀರ ಸ್ಥಿತಿಯಲ್ಲಿದ್ದ ಸೌಮ್ಯಶ್ರೀ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಂದೇಶ್ ಕುಲಾಲ್ ಪರಿಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *