ಕುಣಿತ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ಸಮಗ್ರ‌ನ್ಯೂಸ್: ದೇವಸ್ಥಾನದ ಜಾತ್ರೋತ್ಸವದ ಸಂದರ್ಭ ಕುಣಿತ ಭಜನೆ ಮಾಡುತ್ತಾ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಫೆಬ್ರವರಿ 28ರ ರಾತ್ರಿ ಪುತ್ತೂರು ತಾಲೂಕಿನ ಕಾವು ಎಂಬಲ್ಲಿ ಸಂಭವಿಸಿದೆ. ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಮೃತರು.

Ad Widget ... ..

ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಕುಣಿತ ಭಜನೆ ಕಾರ್ಯಕ್ರಮದಲ್ಲಿ ರತ್ನಾವತಿ ಬಾಳಪ್ಪ ಪೂಜಾರಿ ಭಾಗವಹಿಸಿದ್ದರು. ಭಜನೆ ಕುಣಿತ ಮಾಡುತ್ತಿರುವ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆ ತೆಗೆದುಕೊಂಡು ಹೋಗಲಾಗಿದ್ದು, ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

Ad Widget

ದೇವರಲ್ಲಿ ಅಪಾರ ಭಕ್ತಿ ಹೊಂದಿದ್ದ ಅವರಿಗೆ ಫೆಬ್ರವರಿ 27ರಂದು ಭಜನೆಗೆ ಬರಲು ಸಾಧ್ಯವಾಗಿರಲಿಲ್ಲ. ಫೆಬ್ರವರಿ 28ರಂದು ಎರಡು ಭಜನೆ ಮಾಡಿದ ಬಳಿಕ ಮೂರನೇ ಭಜನೆ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾರೆ. ಅವರು ವಿವಾಹಿತ ಪುತ್ರಿಯನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *