ಒಮಾನ್: ಕೈತಪ್ಪಿದ ಪ್ರೀತಿಗಾಗಿ ಲೈವ್ ನಲ್ಲೇ ಸುಸೈಡ್ ಮಾಡಿಕೊಂಡ ಮಂಗಳೂರಿನ ಯುವಕ

ಸಮಗ್ರ ನ್ಯೂಸ್: ಒಮಾನ್ ದೇಶದಲ್ಲಿ ಉದ್ಯೋಗದಲ್ಲಿದ್ದ ತಾಲ್ಲೂಕಿನ ಸೋಮೇಶ್ವರ ಯುವಕ ಪ್ರೇಮ ವೈಫಲ್ಯದ ಕಾರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೊ ಪ್ರಸಾರ ಮಾಡುತ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget ... ..

ಸೋಮೇಶ್ವರದ ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಒಂದೂವರೆ ವರ್ಷಗಳಿಂದ ಒಮಾನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂದೂವರೆ ತಿಂಗಳ ಹಿಂದೆ ಊರಿಗೆ ಮರಳಿದ್ದ ಅವರು ರಜೆ ಮುಗಿಸಿ ಈಚೆಗಷ್ಟೇ ಒಮಾನ್‌ಗೆ ತೆರಳಿದ್ದರು.

Ad Widget

ಪುನೀತ್ ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಯುವತಿ ಫೋನ್ ಕರೆಗಳನ್ನು ಸ್ವೀಕರಿಸುತ್ತಿರಲಿಲ್ಲ. ಸಂದೇಶಗಳಿಗೆ ಪ್ರತಿಕ್ರಿಯಿಸುತ್ತಿರಲಿಲ್ಲ. ಇದರಿಂದ ಪುನೀತ್ ಮನನೊಂದಿದ್ದರು ಎನ್ನಲಾಗಿದೆ. ಈ ನೋವನ್ನು ಗೆಳೆಯರ ಬಳಿಯೂ ಹಂಚಿಕೊಂಡಿದ್ದರು.

ಪ್ರೀತಿಸಿದ ಹುಡುಗಿ ದೂರವಾದ ನೋವಿನಲ್ಲಿ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೊ ಪ್ರಸಾರ ಮಾಡುತ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *