ಟಿ.20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಫೈನಲ್ ತಲುಪಿದ ಭಾರತ

ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಸೋಲಿಸಿದ ಭಾರತ ತಂಡವು ಫೈನಲ್ ಗೇರಿದೆ.

Ad Widget ... ..

ಭಾರತ ನೀಡಿದ 254 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತು.

Ad Widget

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 253 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಕೂಡ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿತು. ಗುರಿ ದೊಡ್ಡದಿದ್ದರಿಂದ ಇಂಗ್ಲೆಂಡ್‌, ಭಾರತಕ್ಕೆ ಸುಲಭ ತುತ್ತಾಗಲಿದೆ ಎಂದು ಭಾವಿಸಲಾಗಿತ್ತು.

ಆದರೆ ಆಂಗ್ಲರ ಪರ ಕೆಚ್ಚೆದೆಯ ಬ್ಯಾಟಿಂಗ್‌ ಪ್ರದರ್ಶಿಸಿದ ಜೆಕಬ್ ಬೆಥೆಲ್ ಸ್ಫೋಟಕ ಶತಕ ಸಿಡಿಸಿ ಇಂಗ್ಲೆಂಡ್​ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಆದರೆ ಕೊನೆಯ 4 ಓವರ್​ಗಳಲ್ಲಿ ಪಂದ್ಯದ ದಿಕ್ಕು ಬದಲಿಸಿದ ಭಾರತದ ಬೌಲರ್​ಗಳು ತಂಡವನ್ನು ರಣರೋಚಕ ಗೆಲುವಿನತ್ತ ಕೊಂಡೊಯ್ದರು.

Leave a Comment

Your email address will not be published. Required fields are marked *