ಅಡುಗೆ ಅನಿಲ‌ ಪೂರೈಕೆಯಲ್ಲಿ ವ್ಯತ್ಯಯ| ಬೆಂಗಳೂರಿನಲ್ಲಿ ಹೊಟೇಲ್ ಬಂದ್ ಮಾಡಲು ತೀರ್ಮಾನ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನ ಹೋಟೆಲ್ ಉದ್ಯಮವು ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸೋಮವಾರದಿಂದ ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯನ್ನು ದಿಢೀರನೆ ಸ್ಥಗಿತಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್‌ಗಳ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Ad Widget ... ..

ಈ ವ್ಯತ್ಯಯದಿಂದ ದಿನನಿತ್ಯದ ಊಟಕ್ಕಾಗಿ ಹೋಟೆಲ್‌ಗಳ ಮೇಲೆ ಅವಲಂಬಿತರಾಗಿರುವ ಸಾಮಾನ್ಯ ಜನರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ವೃತ್ತಿಪರರಿಗೆ ತೊಂದರೆ ಉಂಟಾಗಲಿದೆ ಎನ್ನುವ ಆಕ್ರೋಶಗಳು ವ್ಯಕ್ತವಾಗಿವೆ. ಇನ್ನೂ ಗ್ಯಾಸ್ ಸರಬರಾಜಿನ ಕೊರತೆಯಿಂದಾಗಿ ನಗರದೆಲ್ಲೆಡೆ ಇರುವ ಹೋಟೆಲ್‌ಗಳು ನಾಳೆಯಿಂದ ಮುಚ್ಚಲು ನಿರ್ಧರಿಸಿವೆ.

Ad Widget

ತೈಲ ಕಂಪನಿಗಳು 70 ದಿನಗಳವರೆಗೆ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಭರವಸೆ ನೀಡಿದ್ದವು. ಆದರೆ, ಇದೀಗ ಏಕಾಏಕಿ ಪೂರೈಕೆಯನ್ನು ಸ್ಥಗಿತಗೊಳಿಸಿರುವುದು ಹೋಟೆಲ್ ಮಾಲೀಕರಿಗೆ ಶಾಕ್ ನೀಡಿದೆ. ಕೂಡಲೇ ಸಂಬಂಧಪಟ್ಟ ಕೇಂದ್ರ ಸಚಿವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಗ್ಯಾಸ್ ಪೂರೈಕೆಯನ್ನು ತಕ್ಷಣವೇ ಪುನರಾರಂಭಿಸುವಂತೆ ಹೋಟೆಲ್ ಮಾಲೀಕರ ಸಂಘ ಆಗ್ರಹಿಸಿದೆ.

ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇಸ್ರೇಲ್ ದಾಳಿಯ ನಂತರ ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್‌ಪಿಜಿ ಸರಬರಾಜು ಮೇಲೆ ಬೀರಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ರಿಫೈನರಿಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಹಾಗೂ ದೇಶೀಯ ಎಲ್‌ಪಿಜಿ ಬಳಕೆದಾರರಿಗೆ ಆದ್ಯತೆ ನೀಡುವಂತೆ ಆದೇಶಿಸಿದೆ. ಸರ್ಕಾರದ ಮೂಲಗಳು ತಿಳಿಸಿದಂತೆ, ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ, ನಾರ್ವೆ ಹಾಗೂ ಯುಎಇ ದೇಶಗಳು ಎಲ್‌ಪಿಜಿ ಮಾರಾಟ ಮಾಡಲು ಮುಂದೆ ಬಂದಿವೆ ಅಂತಾ ವರದಿಯಾಗಿದೆ.

Leave a Comment

Your email address will not be published. Required fields are marked *