ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಅಪರಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ.
ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬಸ್ ನಡುವೆ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರು ಪ್ರಯಾಣಿಸುತ್ತದ್ದ ಸ್ವೀಫ್ಟ್ ಕಾರು ಮತ್ತು ಧರ್ಮಸ್ಥಳದಿಂದ ತಿರುಪತಿ ಹೊರಟಿರುವ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಭೀಕರ ರಸ್ತೆ ಅಪಘಾತ ನಡೆದಿದೆ.
ಕಾರಿನಲ್ಲಿದ್ದ ಮಾಜಿ ಎಪಿಎಂಸಿ ಸದಸ್ಯ ಚಂದ್ರಶೇಖರ ಶಿಶಿಲ, ಜನಾರ್ದನ ಗೌಡ ಕೇರಿಮಾರ್ ಉಜಿರೆ, ಕಕ್ಕಿಂಜೆ ಫೈನಾನ್ಸ್ ನ ಶ್ರೀಧರ ಗೌಡ ಮರಕಡ ಅರಳಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಕಾರಿನಲ್ಲಿದ್ದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಉಜಿರೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.






