ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್| ಬೆಳ್ತಂಗಡಿಯಲ್ಲಿ ಯುವತಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget ... ..

ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ 2023ರ ಫೆಬ್ರವರಿ 2ರಂದು ಭಾರತೀಯ ದಂಡ ಸಂಹಿತೆಯ ವಿವಿಧ ವಿಧಿಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಸಂದರ್ಭದಲ್ಲಿ ಯುವತಿ ಪ್ರಚೋದನಾತ್ಮಕ ವಿಷಯಗಳನ್ನು ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

ಈ ಹಿನ್ನೆಲೆಯಲ್ಲಿ ಮಾರ್ಚ್ 19ರಂದು ಆಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಯುವತಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಸೂಚನೆಯಂತೆ ವಕೀಲರಾದ ಅಜಯ್ ಸುವರ್ಣ ಹಾಗೂ ಸಂತೋಷ್ ಶೆಟ್ಟಿ ಜಾಮೀನು ಪ್ರಕ್ರಿಯೆಯಲ್ಲಿ ಸಹಕರಿಸಿದ್ದಾರೆ.

Leave a Comment

Your email address will not be published. Required fields are marked *