ಎಸ್ಎಸ್ಎಲ್ ಸಿ ಪರೀಕ್ಷೆ ಅಂಕಗಳಲ್ಲಿ ಭಾರೀ ಬದಲಾವಣೆ| ಹಿಂದಿ ಭಾಷೆಗಿಲ್ಲ ಅಂಕ ಮಾನ್ಯತೆ; ಗ್ರೇಡ್ ಗೆ ಮಾತ್ರ ಸೀಮಿತ

ಸಮಗ್ರ ನ್ಯೂಸ್: ಕರ್ನಾಟಕ ಶಿಕ್ಷಣ ಇಲಾಖೆಯು SSLC ಪರೀಕ್ಷಾ ಪದ್ಧತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ತೃತೀಯ ಭಾಷೆಯನ್ನು ಕೇವಲ ‘ಗ್ರೇಡಿಂಗ್’ ವಿಷಯವನ್ನಾಗಿ ಪರಿವರ್ತಿಸುವ ಮೂಲಕ, ಒಟ್ಟು ಅಂಕಗಳನ್ನು 625 ರಿಂದ 525 ಕ್ಕೆ ಇಳಿಸಿದೆ. ಇದರಿಂದ ವಿದ್ಯಾರ್ಥಿಗಳ ಶೇಕಡಾವಾರು ಅಂಕಗಳ ಲೆಕ್ಕಾಚಾರ ಸುಲಭವಾಗಲಿದ್ದು, ತೃತೀಯ ಭಾಷೆಯ ಅಂಕಗಳ ಆತಂಕ ದೂರವಾಗಲಿದೆ.

Ad Widget ... ..

ರಾಜ್ಯದಲ್ಲಿ ಎಸ್​​ಎಸ್​ಎಲ್​​ಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಶಿಕ್ಷಣ ಇಲಾಖೆ ಎಸ್​​ಎಸ್​ಎಲ್​​ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗೆ ಮುಂದಾಗಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಮತ್ತು ಮರಾಠಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸಲಾಗುವುದಿಲ್ಲ. ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625ರಿಂದ 525 ಇಳಿಕೆ ಮಾಡಲಾಗಿದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ.

Ad Widget

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಕೆಆರ್. ವೃತ್ತದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ನಿಯಮವು ಹೊಸ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಉಳಿದ ತರಗತಿಗಳ ಕುರಿತು ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆ ತೀರ್ಮಾನಿಸಲಿದೆ ಎಂದು ಹೇಳಿದ್ದಾರೆ.

SSLC ಪರೀಕ್ಷೆ ಒಟ್ಟು 625 ಅಂಕಗಳಿಗೆ ನಡೆಯುತ್ತಿತ್ತು. ಆದರೆ, ಇನ್ನು ಮುಂದೆ ಹಿಂದಿ ವಿಷಯದ 100 ಅಂಕಗಳನ್ನು ಫಲಿತಾಂಶದಲ್ಲಿ ಹೊರಗಿಟ್ಟಿರಲಿದ್ದು, ಇವುಗಳನ್ನು ಪರೀಕ್ಷೆ ಅಂಕಗಳಲ್ಲಿ ಒಳಪಡಿಸಲಾಗುವುದಿಲ್ಲ. ವಿದ್ಯಾರ್ಥಿಗಳ ಫಲಿತಾಂಶವನ್ನು ಕೇವಲ 525 ಅಂಕಗಳ ಮೇಲೆ ಮಾತ್ರ ಪರಿಗಣಿಸಲಾಗುವುದು. ಈ ಬದಲಾವಣೆಗಳಿಂದ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ನಿರೀಕ್ಷೆಯಿದೆ.

Leave a Comment

Your email address will not be published. Required fields are marked *