ಹನುಮ ಜಯಂತಿ ಆಚರಣೆ ಹಿನ್ನಲೆ| ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆಯುವ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಏಪ್ರಿಲ್, 02 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ವಿರಾಜಪೇಟೆ ನಗರ ಮತ್ತು ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

Ad Widget ... ..

ಅಲ್ಲದೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲು ಪೊಲೀಸ್ ಬಂದೋಬಸ್ತ್ ನಡೆಸಲು ಅವರು ಸೂಚಿಸಿರುವುದಾಗಿ ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *