ಮಂಗಳೂರು: ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯವನ್ನು ತೊರೆದು, ಬಾಡಿಗೆ ಮನೆಯಲ್ಲಿ ವಾಸವಿದ್ದುಕೊಂಡು ಮಾದಕ ಪದಾರ್ಥಗಳ ಮಾರಾಟ ಜಾಲದಲ್ಲಿ ತೊಡಗಿದ್ದರು ಎಂದು ನಗರ ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

. Ad Widget . Ad Widget . Ad Widget .

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಮಿಷನರ್, ‘ವಿದ್ಯಾರ್ಥಿಯೊಬ್ಬನ ಬ್ಯಾಗಿನಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿತ್ತು. ಆತನ ಪೋಷಕರು ಈ ಬಗ್ಗೆ ನಮಗೆ ಮಾಹಿತಿ ನೀಡಿದ್ದರು. ಆ ಮಾಹಿತಿಯನ್ನು ಆಧರಿಸಿ, ಆತನಿಗೆ ಗಾಂಜಾ ಪೂರೈಸಿದವರ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ, ಬೇರೆ ಬೇರೆ ಕಾಲೇಜುಗಳ ಐವರು ವಿದ್ಯಾರ್ಥಿಗಳು ಹಾಸ್ಟೆಲ್ ತೊರೆದು, ಬಾಡಿಗೆ ಮನೆಯಲ್ಲಿ ಉಳಿದುಕೊಂಡು, ಮಾದಕ ಪದಾರ್ಥ ಪೂರೈಕೆ ವಹಿವಾಟು ನಡೆಸುತ್ತಿದ್ದುದು ಗೊತ್ತಾಗಿದೆ. ಆ ವಿದ್ಯಾರ್ಥಿಗಳನ್ನು ಬಂಧಿಸಿದ್ದೇವೆ. ಅವರೆಲ್ಲರೂ ಪ್ರಾಯಪ್ರಬುದ್ಧರು. ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ಮಾಹಿತಿ ಬಹಿರಂಗಪಡಿಸಿಲ್ಲ’ ಎಂದು ತಿಳಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

‘ನಗರದ ಆರು ಕಾಲೇಜುಗಳ 40 ವಿದ್ಯಾರ್ಥಿಗಳಿಗೆ ಹಾಗೂ ಇತರ ಹತ್ತು ಮಂದಿಗೆ ಮಾದಕ ಪದಾರ್ಥ ಪೂರೈಕೆ ಮಾಡಿದ್ದನ್ನು ಪತ್ತೆ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆಪ್ತಸಮಾಲೋಚನೆ ನಡೆಸಲಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *