ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎ.17ಕ್ಕೆ ತೀರ್ಪು ಪ್ರಕಟ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ ಸ್ಫೋಟ ಪ್ರಕರಣದ ಆರೋಪಿ ಮಹಮ್ಮದ್ ಶಾರಿಕ್‌ಗೆ ಶಿಕ್ಷೆಯ ಪ್ರಮಾಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಏಪ್ರಿಲ್ 17 ರಂದು ಪ್ರಕಟಿಸಲಿದೆ.

. Ad Widget . Ad Widget . Ad Widget .

ಮೂರು ತಿಂಗಳ ಹಿಂದೆ ಮೊಹಮ್ಮದ್ ಶಾರಿಕ್ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಇತ್ತೀಚೆಗೆ ಸ್ವೀಕರಿಸಿದೆ. ಶುಕ್ರವಾರವೂ ಪ್ರಕರಣದ ಹೆಚ್ಚಿನ ವಿಚಾರಣೆ ನಡೆದಿದ್ದು, ಈ ಸಂದರ್ಭದಲ್ಲಿ ಆರೋಪಿಗೆ ವಿಧಿಸಲಾಗುವ ಶಿಕ್ಷೆಯನ್ನು ಏಪ್ರಿಲ್ 17 ರಂದು ಪ್ರಕಟಿಸುವುದಾಗಿ ನ್ಯಾಯಾಧೀಶರು ಸೂಚಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು 2024ರಲ್ಲಿ ಶಾರಿಕ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದರು. 2022ರ ನವೆಂಬರ್ 19ರಂದು ಸಂಜೆ 4.40ರ ಸುಮಾರಿಗೆ ಕಂಕನಾಡಿ ಪೊಲೀಸ್ ವ್ಯಾಪ್ತಿಯಲ್ಲಿ ಶಾರಿಕ್ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕುಕ್ಕರ್‌ನಲ್ಲಿ ಬಚ್ಚಿಟ್ಟಿದ್ದ ಸುಧಾರಿತ ಸ್ಫೋಟಕ (ಐಇಡಿ) ಸ್ಫೋಟಗೊಂಡಿತ್ತು.

Leave a Comment

Your email address will not be published. Required fields are marked *