ಬಿಹಾರದ ನೂತನ ಸಿಎಂ ಆಗಿ‌ ಸಾಮ್ರಾಟ್ ಚೌಧರಿ ಪ್ರಮಾಣ ಸ್ವೀಕಾರ

ಸಮಗ್ರ ನ್ಯೂಸ್: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಬಿಹಾರ ಸರ್ಕಾರವನ್ನು ಮುನ್ನಡೆಸಲಿರುವ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಸಾಮ್ರಾಟ್ ಚೌಧರಿ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಮುನ್ನ, ಪಾಟ್ನಾದ ಪಂಚಮುಖಿ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Ad Widget ... ..

ನಿತೀಶ್ ಕುಮಾರ್ ಅವರು ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ನಂತರ ಮಂಗಳವಾರ (ಏಪ್ರಿಲ್ 14, 2026) ಅಧಿಕೃತವಾಗಿ ರಾಜೀನಾಮೆ ನೀಡಿದ್ದರು. ಹಲವಾರು ದಿನಗಳ ಕುತೂಹಲ ಮತ್ತು ಊಹಾಪೋಹಗಳ ನಂತರ, ನಿತೀಶ್ ಅವರ ರಾಜೀನಾಮೆಯ ಒಂದು ಗಂಟೆಯೊಳಗೆ ಸಮ್ರಾಟ್ ಚೌಧರಿ ಅವರು ಬಿಜೆಪಿ ಮತ್ತು ಎನ್‌ಡಿಎ (NDA) ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು. ಜೆಡಿ(ಯು) ನಾಯಕರಾದ ನಿತೀಶ್ ಕುಮಾರ್ ಅವರು ಕಳೆದ ವಾರ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ.

Ad Widget

ನೂತನ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಲೋಕಭವನದಲ್ಲಿ ಬೆಳಿಗ್ಗೆ 10.50ಕ್ಕೆ ನಡೆದಿದ್ದು, ಹಿರಿಯ ಎನ್‌ಡಿಎ ನಾಯಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸಾಮ್ರಾಟ್ ಚೌಧರಿ ಅವರು ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Leave a Comment

Your email address will not be published. Required fields are marked *