ಉಜಿರೆ: ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬ ತನ್ನ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಟಿ.ಬಿ. ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್ (17) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಖಾಸಗಿ ಕಾಲೇಜಿನಲ್ಲಿ ಪಿಯು ವಿದ್ಯಾಭ್ಯಾಸ ಮಾಡುತ್ತಿದ್ದನು.

. Ad Widget . Ad Widget . Ad Widget .

ಇತ್ತೀಚೆಗಷ್ಟೇ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದ ಅಯಾನ್, ದ್ವಿತೀಯ ಪಿಯುಸಿ ತರಗತಿಗೆ ಪ್ರವೇಶ ಪಡೆದಿದ್ದನು ಎಂದು ತಿಳಿದುಬಂದಿದೆ. ಬುಧವಾರ ತನ್ನ ಅಪಾರ್ಟ್ಮೆಂಟ್‌ನ ಕೊಠಡಿಯಲ್ಲಿದ್ದ ಅಯಾನ್, ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ. ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ವಿದ್ಯಾರ್ಥಿಯ ಆತ್ಮಹತ್ಯೆಗೆ ನಿಖರವಾದ ಕಾರಣಗಳು ಏನೆಂಬುದು ಸದ್ಯಕ್ಕೆ ಲಭ್ಯವಾಗಿಲ್ಲ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬಂದರೂ, ಸಾವಿನ ಹಿಂದಿನ ಅಸಲಿ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Comment

Your email address will not be published. Required fields are marked *