ಬೆಂಗಳೂರು: ಪೆಟ್ರೋಲಿಯಂ ಕಂಪೆನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂ. ಏರಿಕೆ ಮಾಡಿದ್ದು, ಸಾಮಾನ್ಯ ಜನರಿಗೆ ಕೊರೊನಾ ಸಂದರ್ಭದಲ್ಲಿ ಮತ್ತೊ ಹೊಡೆತ ನೀಡಿದೆ.
ಇದರಿಂದಾಗಿ ರಾಜಧಾನಿ ದೆಹಲಿಯಲ್ಲಿ ಈಗ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 14.2 ಕೆಜೆ ತೂಕದ ಸಿಲೆಂಡರ್ ಗೆ 884 ರೂ. 50 ಪೈಸೆಯಾಗಿದೆ.
ಹೊಸ ದರ ಇಂದೇ ಜಾರಿಗೆ ಬರಲಿದೆ. ಇನ್ನು 19 ಕೆಜಿ ಕಮರ್ಷಿಯಲ್ ಸಿಲೆಂಡರ್ ಬೆಲೆ 75 ರೂಪಾಯಿ ಹೆಚ್ಚಳವಾಗಿದ್ದು ಅದಕ್ಕೆ ಗ್ರಾಹಕರು ಸಾವಿರದ 693 ರೂಪಾಯಿಯಷ್ಟು ದೆಹಲಿಯಲ್ಲಿ ದರವಿದೆ.ಕಳೆದ 15 ದಿನಗಳ ಅಂತರದಲ್ಲಿ 50 ರೂಪಾಯಿಯಷ್ಟು ಅಡುಗೆ ಅನಿಲ ದರ ಏರಿಕೆಯಾಗಿದೆ. ಕಳೆದ ಜನವರಿ 1ರಿಂದ ದೇಶದಲ್ಲಿ ಅಡುಗೆ ಅನಿಲ ಬೆಲೆ 169 ರೂಪಾಯಿಗಳಷ್ಟು ಏರಿಕೆಯಾಗಿದೆ.
ಅಡುಗೆ ಅನಿಲ ಬೆಲೆ ಏರಿಕೆಯಾದಂತೆ ಹೊಟೇಲ್ ಗಳಲ್ಲಿ ಆಹಾರ, ತಿಂಡಿ-ತಿನಿಸುಗಳ ಬೆಲೆಯೂ ಹೆಚ್ಚಳವಾಗುವುದು ಸಾಮಾನ್ಯ. ರಾಜಧಾನಿ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 862 ರೂಪಾಯಿ 50 ಪೈಸೆಯಾಗಿದೆ.