ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಉಪ್ಪಿನಂಗಡಿ- ಕೊಯಿಲಾ ರಸ್ತೆಯ ಹಿರೇಬಂಡಾಡಿ ಶಾಖೆಪುರ ಎಂಬಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

. Ad Widget . Ad Widget . Ad Widget

​ಮೃತರನ್ನು ಹಿರೇಬಂಡಾಡಿಯ ರವೀಂದ್ರ ರೈ ಮುರದಮೇಲುರವರ ಪುತ್ರ ಕಾಲೇಜ್ ವಿದ್ಯಾರ್ಥಿ ಲಿಖಿತ್ ರೈ ಎಂದು ಗುರುತಿಸಲಾಗಿದೆ.

. Ad Widget .

ಏ 22ರಂದು ಸಂಜೆ ಲಿಖಿತ್ ರೈ ಅವರು ತಮ್ಮ ಕೆಎ-21-ಇಸಿ-7292 ಸಂಖ್ಯೆಯ ಮೋಟಾರ್ ಸೈಕಲ್‌ನಲ್ಲಿ ಉಪ್ಪಿನಂಗಡಿ – ಕೊಯಿಲ ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಹಿರೇಬಂಡಾಡಿ ಶಾಖೆಪುರ ಎಂಬಲ್ಲಿ ತಲುಪಿದಾಗ ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ.
​
ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ದಯಾನಂದ ಹಾಗೂ ಸಾರ್ವಜನಿಕರು ತಕ್ಷಣವೇ ಉಪಚರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

Leave a Comment

Your email address will not be published. Required fields are marked *