ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಗುಡುಗು, ಮಳೆ ಸಾಧ್ಯತೆ| 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿ ಗಾಳಿಯ ವಾತಾವರಣದ ನಡುವೆಯೇ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ 2-3 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

. Ad Widget . Ad Widget . Ad Widget .

ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮೇ 1ರಿಂದ ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *