ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ದಿನಾಂಕವನ್ನು ತಾಂತ್ರಿಕ ಸಮಸ್ಯೆಯಿಂದ ಇಲಾಖೆ ಮುಂದೂಡಿದೆ.
545 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 26ಕ್ಕೆ ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.
ಆದರೆ, ತಾಂತ್ರಿಕ ಸಮಸ್ಯೆಯಿಂದ ಅಂದು ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಅಕ್ಟೋಬರ್ 3ರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 1.30ರಿಂದ 3 ಗಂಟೆ ವರೆಗೆ ಪತ್ರಿಕೆ-2 ನಡೆಸಲು ನಿರ್ಧರಿಸಲಾಗಿದೆ ಎಂದು ಪೊಲೀಸ್ ನೇಮಕಾತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.