ಸೌಜನ್ಯ ಅತ್ಯಾಚಾರ ‌ಮತ್ತು ಕೊಲೆ ಪ್ರಕರಣ| ನಿಲುವು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

Ad Widget ... ..

ಸಿಬಿಐ ತನಿಖೆಯ ನಂತರವೂ ಆರೋಪಿ ಖುಲಾಸೆಗೊಂಡಿರುವ ಹಿನ್ನೆಲೆಯಲ್ಲಿ, ಮರು ತನಿಖೆಯ ಅಗತ್ಯತೆ ಕುರಿತು ಸರ್ಕಾರವು ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

Ad Widget

ಕೇಸ್ ಸಂಬಂಧ ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು SIT ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ನಮಗೆ ಸ್ಪಷ್ಟ ನಿಲುವನ್ನು ನೀಡಿ ಎಂದು ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವಿಷ್ಕರ್ ಸಿಂಘ್ವಿ ಅವರಿಗೆ ಪೀಠವು ಖಡಕ್ ಸೂಚನೆ ನೀಡಿದೆ.

ಇನ್ನು, ಸಂತ್ರಸ್ತ ಕುಟುಂಬದ ಪರ ವಕೀಲರು ಹೊಸದಾಗಿ ಸಿಬಿಐ ತನಿಖೆಗೆ ಒತ್ತಾಯಿಸಿದರು. ಸಂತ್ರಸ್ತೆಯ ವಸ್ತುಗಳು ಇನ್ನೂ ಸಂರಕ್ಷಿಸಲ್ಪಟ್ಟಿವೆ, ಡಿಎನ್‌ಎ ಪರೀಕ್ಷೆ ಮಾಡಬಹುದು. ಅಸಲಿ ಅಪರಾಧಿಗಳು ಬೇರೆಯೇ ವ್ಯಕ್ತಿಗಳಾಗಿದ್ದಾರೆ ಎಂದು ವಾಸದಿಸಿದರು. ಇದನ್ನು ಗಮನಿಸಿದ ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 14ಕ್ಕೆ ನಿಗದಿಪಡಿಸಿದೆ.

Leave a Comment

Your email address will not be published. Required fields are marked *