ಪ.ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂಧು ಅದಿಕಾರಿ‌ ನಾಳೆ(ಮೇ9) ಪ್ರಮಾಣವಚನ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಸುದೀರ್ಘ 15 ವರ್ಷಗಳ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತಿಮ ತೆರೆ ಬಿದ್ದಿದೆ. ಐತಿಹಾಸಿಕ ವಿಧಾನಸಭಾ ಚುನಾವಣಾ ಗೆಲುವಿನ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷವು (ಬಿಜೆಪಿ) ಶುಕ್ರವಾರ ಸುವೇಂದು ಅಧಿಕಾರಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯನ್ನಾಗಿ ಘೋಷಿಸಿದೆ.

. Ad Widget . Ad Widget . Ad Widget .

ಕೋಲ್ಕತ್ತಾದ ಹೋಟೆಲ್‌ವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭವಾನಿಪುರ ಮತ್ತು ನಂದಿಗ್ರಾಮ ಎರಡೂ ಕ್ಷೇತ್ರಗಳಲ್ಲಿ ಐತಿಹಾಸಿಕ ಜಯ ಸಾಧಿಸಿ ‘ಜೈಂಟ್ ಕಿಲ್ಲರ್’ ಎನಿಸಿಕೊಂಡಿದ್ದ ಸುವೇಂದು ಅಧಿಕಾರಿ ಅವರ ಹೆಸರನ್ನು ಶಾಸಕರು ಒಕ್ಕೊರಲಿನಿಂದ ಅನುಮೋದಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮೂಲಗಳ ಪ್ರಕಾರ, ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಮೇ 9 ರಂದು ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ನಡೆಯುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದ ಸುವೇಂದು ಅಧಿಕಾರಿ, ನಂತರ ಬಿಜೆಪಿ ಸೇರಿ ಬಂಗಾಳದಲ್ಲಿ ಪಕ್ಷದ ಪ್ರಬಲ ಮುಖವಾಗಿ ಹೊರಹೊಮ್ಮಿದ್ದರು. ಈಗ ಅವರು ಪಶ್ಚಿಮ ಬಂಗಾಳದ ಮೊಟ್ಟಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Leave a Comment

Your email address will not be published. Required fields are marked *