ಕಡಬ: ಗುಂಡ್ಯ ಹೊಳೆಯಲ್ಲಿ ಮುಳುಗಿ‌ ಇಬ್ಬರು ವಿದ್ಯಾರ್ಥಿನಿಯರು ಸಾವು

ಸಮಗ್ರ ನ್ಯೂಸ್: ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ಮುಳುಗಿ ಸಾವನಪ್ಪಿದ ಘಟನೆ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಹಾಗೂ ಸುನೀತ (21) ಎಂದು ಗುರುತಿಸಲಾಗಿದೆ.

. Ad Widget . Ad Widget . Ad Widget .

ಬೇಸಿಗೆ ರಜೆಯ ಮಜಾ ಕಳೆಯಲು ಐವರು ವಿದ್ಯಾರ್ಥಿನಿಯರ ತಂಡವು ಗುಂಡ್ಯ ಹೊಳೆಯ ಕೊಲ್ಯದಕಟ್ಟ ಅಣೆಕಟ್ಟು ಸಮೀಪಕ್ಕೆ ಬಂದಿತ್ತು. ಸ್ನಾನಕ್ಕಾಗಿ ನದಿಗೆ ಇಳಿದಿದ್ದಾಗ, ನೀರಿನ ಆಳದ ಅರಿವಿಲ್ಲದೆ ಇಬ್ಬರು ಮುಳುಗಿದ್ದಾರೆ. . ಇದನ್ನು ಗಮನಿಸಿದ ಉಳಿದ ಗೆಳತಿಯರು ಅವರನ್ನು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸಂಜೆಯ ವೇಳೆ ಸಂಭವಿಸಿದ ಈ ಅನಿರೀಕ್ಷಿತ ದುರಂತದಿಂದ ವಿಮಲಗಿರಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *