ಜೂನ್ ನಿಂದ ಅನ್ನಭಾಗ್ಯ ಅಕ್ಕಿ ಜೊತೆಗೆ ‘ಇಂದಿರಾ ಕಿಟ್’ – ಸಚಿವ ಮುನಿಯಪ್ಪ

ಸಮಗ್ರ ನ್ಯೂಸ್: ಪಡಿತರ ಚೀಟಿದಾರರಿಗೆ ಆಹಾರ ಸಚಿವರಿಂದ ಸಿಹಿ ಸುದ್ದಿ ಸಿಕ್ಕಿದೆ. ಮುಂದಿನ ತಿಂಗಳಿನಿಂದ ಅನ್ನಭಾಗ್ಯ ಅಕ್ಕಿಯ ಜೊತೆಗೆ ತೊಗರಿ ಬೇಳೆ, ಉಪ್ಪು, ಅಡುಗೆ ಎಣ್ಣೆ, ಸಕ್ಕರೆ ಒಳಗೊಂಡ ಇಂದಿರಾ ಕಿಟ್ ವಿತರಿಸಲು ಟೆಂಡರ್ ಕರೆಯಲಾಗಿದೆ.

. Ad Widget . Ad Widget . Ad Widget .

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ ಅವರು, ಮುಂದಿನ ತಿಂಗಳಿಂದ ಅನ್ನಭಾಗ್ಯ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸುಮಾರು ಆರು ಸಾವಿರ ಕೋಟಿ ರೂ. ಟೆಂಡರ್ ಇದಾಗಿದೆ. ಬಹುತೇಕ ಈ ವಾರದಲ್ಲಿ ಅರ್ಹ ಬಿಡ್ ದಾರರಿಗೆ ಟೆಂಡರ್ ನೀಡಲಾಗುವುದು. ಮುಂದಿನ ತಿಂಗಳಿನಿಂದ ಅನ್ನಭಾಗ್ಯ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಇಂದಿರಾ ಕಿಟ್ ನಲ್ಲಿ ಅಡುಗೆ, ಎಣ್ಣೆ, ಉಪ್ಪು, ಸಕ್ಕರೆ, ತೊಗರಿ ಬೇಳೆ ಮೊದಲಾದ ವಸ್ತುಗಳು ಇರಲಿವೆ. ಅನ್ನಭಾಗ್ಯ ಅಕ್ಕಿ ಜೊತೆಗೆ ಇಂದಿರಾ ಕಿಟ್ ವಿತರಿಸಲಾಗುವುದು ಎನ್ನಲಾಗಿದೆ.

Leave a Comment

Your email address will not be published. Required fields are marked *