ಮೂಲ್ಕಿ ಪೊಲೀಸರ‌ ಭರ್ಜರಿ‌ ಕಾರ್ಯಾಚರಣೆ| ₹35 ಲಕ್ಷ ಮೌಲ್ಯದ ಗಾಂಜಾ ಸಹಿತ ಸಿಕ್ಕಿಬಿದ್ದ ಬಿಸಿಎ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮಾದಕ ದ್ರವ್ಯ ಜಾಲದ ಬೇರುಗಳು ದಿನದಿಂದ ದಿನಕ್ಕೆ ಆಳವಾಗಿ ಇಳಿಯುತ್ತಿರುವುದು ಆತಂಕ ಮೂಡಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ, ನಗರದ ಮುಲ್ಕಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿದ್ದಾರೆ.

. Ad Widget . Ad Widget . Ad Widget .

​ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾದ 21 ವರ್ಷದ ಸುಹಾನ ಬಂಧಿತ ಆರೋಪಿತೆ. ಈಕೆ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದುಬಂದಿದೆ. ಮಂಗಳವಾರದಂದು ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯ ಬಳಿ ಮಾದಕ ದ್ರವ್ಯವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪಣಂಬೂರು ಎಸಿಪಿ ಮತ್ತು ಮುಲ್ಕಿ ಪೊಲೀಸರ ಜಂಟಿ ತಂಡ ಈ ದಾಳಿ ನಡೆಸಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

​ದಾಳಿಯ ಸಂದರ್ಭದಲ್ಲಿ ಆರೋಪಿಯಿಂದ ಅಂದಾಜು 1 ಕೆಜಿ 42 ಗ್ರಾಂ ತೂಕದ ಹೈಡ್ರೋವಿಡ್ ಎಂಬ ಅತ್ಯಂತ ದುಬಾರಿ ಮಾದರಿಯ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 35 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದ್ದು, ಇದರೊಂದಿಗೆ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಕೂಡ ಪೊಲೀಸರ ವಶದಲ್ಲಿದೆ.

ತನಿಖೆಯ ವೇಳೆ ಲಭ್ಯವಾದ ಮಾಹಿತಿಯಂತೆ, ಈ ಮಾದಕ ವಸ್ತುವನ್ನು ಆರೋಪಿಯು ಚೆನ್ನೈನಿಂದ ತರಿಸಿಕೊಂಡಿದ್ದು, ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಸಂಚು ರೂಪಿಸಿದ್ದಳು ಎನ್ನಲಾಗಿದೆ.

​ಅಚ್ಚರಿಯ ವಿಷಯವೆಂದರೆ, ಯುವತಿಯ ಮೇಲೆ ಈ ಹಿಂದೆಯೂ ಕೂಡ ಗಂಭೀರ ಮಾದಕ ದ್ರವ್ಯ ಪ್ರಕರಣಗಳು ದಾಖಲಾಗಿವೆ. ಕಾವೂರು ಪೊಲೀಸ್ ಠಾಣೆಯಲ್ಲಿ ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಭಾಗದಲ್ಲಿ ಎನ್.ಡಿ.ಪಿ.ಎಸ್ (NDPS) ಕಾಯ್ದೆಯಡಿ ಈಕೆಯ ಮೇಲೆ ಈಗಾಗಲೇ ಪ್ರಕರಣಗಳು ದಾಖಲಾಗಿದೆ.

ಹೀಗಾಗಿ ಆಕೆ ಮತ್ತೆ ಅಕ್ರಮ ದಂಧೆಯಲ್ಲಿ ತೊಡಗಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಸದ್ಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದ ಹಿಂದೆ ಇನ್ನಾರಿದ್ದಾರೆ ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *