ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗ ರಾಜ್ಯಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ.
ಜೂನ್ 1ರಂದು ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಜೂನ್ 8ರಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆ ದಿನ. ಜೂನ್ 9 ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 11ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಜೂನ್ 18ರಂದು ರಾಅಜ್ಯಸಭೆಯ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಈ 24 ರಾಜ್ಯಸಭೆ ಸದಸ್ಯರು ವಿವಿಧ ರಾಜ್ಯಗಳ ವಿಧಾನಸಭೆಗಳಿಂದ ಚುನಾಯಿತರಾಗುತ್ತಾರೆ. ಸದ್ಯ ಕರ್ನಾಟಕವನ್ನು ಪ್ರತಿನಿಧಿಸಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಳಗಾವಿ ಬಿಜೆಪಿ ಮುಖಂಡ ಈರಣ್ಣ ಕಡಾಡಿ, ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಕೆ. ನಾರಾಯಣ ಅವರ ರಾಜ್ಯಸಭೆಯ ಪ‍್ರಸಕ್ತ ಅವಧಿ ಇದೇ ಜೂನ್ 25 ರಂದು ಕೊನೆಗೊಳ್ಳಲಿದೆ.
ದೇವೇಗೌಡ ಮತ್ತೊಂದು ಅವಧಿಗೆ ರಾಜ್ಯ ಸಭೆಗೆ ಪ್ರವೇಶ ಪಡೆಯುವರೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ವಿಧಾನಸಭೆಯಲ್ಲಿ ಶಾಸಕರ ಸಂಖ್ಯಾ ಬಲದ ಪ್ರಕಾರ ತೆರವಾಗುವ ನಾಲ್ಕು ಸ್ಥಾನಗಳಲ್ಲಿ 3 ಸ್ಥಾನಗಳು ಕಾಂಗ್ರೆಸ್‌ಗೆ ಸಿಗಲಿವೆ. ಬಿಜೆಪಿಗೆ ಒಂದು ಸ್ಥಾನ ಸಿಗುವ ಸಾಧ್ಯತೆ ಇದೆ.
93ರ ಇಳಿ ವಯಸ್ಸಿನ ದೇವೇಗೌಡರು→ ಮತ್ತೊಂದು ಅವಧಿಗೆ ರಾಜ್ಯಸಭೆ ಪ್ರವೇಶಿಸಲು ಉತ್ಸುಕ
ರಾಗಿದ್ದಾರೆ. ಆದರೆ, ಅವರ ಪಕ್ಷಕ್ಕೆ ಸಂಖ್ಯಾ ಬಲ ಇಲ್ಲದ ಕಾರಣ, ಬಿಜೆಪಿ ಸಹಾಯಹಸ್ತ ಚಾಚಿದರೆ ರಾಜ್ಯಸಭೆ ಪ್ರವೇಶಿಸಬಹುದು ಎಂಬ ಲೆಕ್ಕಾಚಾರ ಜೆಡಿಎಸ್ ವರಿಷ್ಠರದ್ದು.







