ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ

ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

Ad Widget ... ..


ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ ಅಧ್ಯಯನ ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

Ad Widget

ಕರಾವಳಿ ಮತ್ತು ರಾಜಧಾನಿ ಜನರ ಬಹುದಿನಗಳ ಕನಸಾಗಿದ್ದ ಮಂಗಳೂರು– ಬೆಂಗಳೂರು ನಡುವಿನ ‘ವಂದೇ ಭಾರತ್ ಎಕ್ಸ್‌ಪ್ರೆಸ್’ (Vande Bharat Express) ರೈಲು ಸಂಚಾರವು ಇನ್ನು ಕೇವಲ ಒಂದು ತಿಂಗಳೊಳಗೆ ಅಧಿಕೃತವಾಗಿ ಪ್ರಾರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಹೈಸ್ಪೀಡ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಹಾಸನ ಮತ್ತು ಮಂಗಳೂರು ನಡುವಿನ ಘಾಟ್ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡ ಬೆನ್ನಲ್ಲೇ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರ ಬೇಡಿಕೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲ ಪ್ರಮುಖ ನಿಲ್ದಾಣಗಳಲ್ಲಿ ಇದಕ್ಕೆ ನಿಲುಗಡೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Leave a Comment

Your email address will not be published. Required fields are marked *