RCB vs GT:ಧರ್ಮಶಾಲಾದಲ್ಲಿ ಯಾರ ದರ್ಬಾರ್‌ ನಡೆಯುತ್ತೆ?

ಧರ್ಮಶಾಲಾ: 19ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 70 ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಪ್ಲೇ ಆಫ್ ಪರ್ವ ಸುರುವಾಗಿದೆ. ಇಂದು (ಮಂಗಳವಾರ)ಸಂಜೆ 7:30ಕ್ಕೆ HPCA ಕ್ರೀಡಾಂಗಣ, ಧರ್ಮಶಾಲಾ,ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸಮಬಲಶಾಲಿಗಳಾದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮಾಜಿ ಚಾಂಪಿಯನ್ಸ್‌ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗಲಿವೆ.

Ad Widget ... ..

ಕ್ವಾಲಿಫೈಯರ್-1 ಫೈಟ್‌ ನಡೆಯಲಿದ್ದು, ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದೆ. ಬ್ಯಾಟಿಂಗ್ ಗೆ ಅನುಕೂಲಕರವಾದ ಧರ್ಮಶಾಲಾ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ತಂಡಗಳೇ ಹೆಚ್ಚುಬಾರಿ ಗೆದ್ದಿರುವುದು ವಿಶೇಷ. ಆದ್ರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದ್ದು ಚೇಸಿಂಗ್ ಮಾಡುವವರಿಗೆ ಹೆಚ್ಚು ಅನುಕೂಲ ಎಂದು ಹೇಳಲಾಗುತ್ತಿದೆ. ಇನ್ನೂ ಕಳೆದ 8 ವರ್ಷಗಳಲ್ಲಿ ಕ್ವಾಲಿಫೈಯರ್‌-1 ನಲ್ಲಿ ಗೆದ್ದವರೇ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಆದ್ದರಿಂದ ಇಂದು ಗೆದ್ದ ತಂಡವೇ ಚಾಂಪಿಯನ್‌ ಪಟ್ಟ ಅಲಂಕರಿಸುವ ಸಾಧ್ಯತೆಗಳಿವೆ ಎಂದು ಕ್ರಿಕೆಟ್‌ ತಜ್ಞರು ಭವಿಷ್ಯ ನುಡಿದಿದ್ದಾರೆ.

Ad Widget

Leave a Comment

Your email address will not be published. Required fields are marked *