ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ಆಯೋಜಿಸಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಿಗೆ 10:30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿಯಿಂದ ಈಗಾಗಲೇ ರಾಜಭವನಕ್ಕೆ ಪತ್ರ ರವಾನೆಯಾಗಿದೆ. ರಾಜ್ಯಪಾಲರು ಸಮಯ ನೀಡಿದಲ್ಲಿ ನಾಳೆ ಬೆಳಿಗ್ಗೆ 10:30ಜ್ಯಪಾಲರನ್ನು ಭೇಟಿಯಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.







