ಜೂ.5ರಂದು ರಾಜ್ಯಕ್ಕೆ ಮುಂಗಾರು ಆಗಮನ

ಸಮಗ್ರ ನ್ಯೂಸ್: ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನದಲ್ಲಿ ಯಾವುದೇ ವಿಳಂಬವಿಲ್ಲ ಎಂಬ ಸಿಹಿ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ನಿಗದಿತ ದಿನಾಂಕದಂತೆ ಜೂನ್ 5 ರಂದೇ ಮಳೆರಾಯ ಕರ್ನಾಟಕವನ್ನು ಪ್ರವೇಶಿಸಲಿದ್ದು, ರಾಜ್ಯದಲ್ಲಿ ಮಳೆಗಾಲಕ್ಕೆ ಅಧಿಕೃತ ಚಾಲನೆ ಸಿಗಲಿದೆ.

Ad Widget ... .. Ad Widget .

ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನಕ್ಕೆ ಕಾಲ ಸನ್ನಿಹಿತವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮಾಹಿತಿ ಪ್ರಕಾರ, ಜೂನ್ 5 ರಂದು ಮುಂಗಾರು ಕರ್ನಾಟಕವನ್ನು ಪ್ರವೇಶಿಸಲಿದೆ. ರ್ನಾಟಕದಲ್ಲಿ ಮುಂಗಾರು ಪ್ರವೇಶ ತಡವಾಗುವುದಿಲ್ಲ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಜೂನ್ 5 ರಂದೇ ಮುಂಗಾರು ಮಳೆಯು ರಾಜ್ಯವನ್ನು ಪ್ರವೇಶಿಸಲಿದ್ದು, ಕೃಷಿ ಚಟುವಟಿಕೆಗಳಿಗೆ ಮರುಜೀವ ಸಿಗಲಿದೆ.

Ad Widget

ಮುಂಗಾರು ಮಳೆಯು ಜೂನ್ 5 ರಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳ ಮೂಲಕ ಕರ್ನಾಟಕವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂಗಾರು ಪ್ರವೇಶದೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.ರಾಜ್ಯದ ಹಲವೆಡೆ ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಲಹೆ ನೀಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಬಿಸಿಲಿನ ತಾಪ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ, ಮುಂಗಾರಿನ ಆಗಮನವು ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.

Leave a Comment

Your email address will not be published. Required fields are marked *