ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7ರವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. 11 ಜಿಲ್ಲೆಗಳಿಗೆ ಜೂ.7ರವರೆಗೆ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜೂ.7ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಈ ಅವಧಿಗಳಲ್ಲಿ ಗುಡುಗು, ಮಿಂಚು ಸಮೇತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಇದರ ಮಧ್ಯೆಯೇ ಬೆಂಗಳೂರಿನ ಹಲವು ಭಾಗಗಳಲ್ಲಿ ಮಂಗಳವಾರ ಸಂಜೆ ಸಾಧಾರಣದಿಂದ ಭಾರೀ ಮಳೆಯಾಗಿದೆ.








