ಗಡೀಪಾರು ಆದೇಶ ಪ್ರಶ್ನಿಸಿ ತಿಮರೋಡಿ‌ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

. Ad Widget . Ad Widget . Ad Widget

ಗಡಿಪಾರು ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 30ರಂದು ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸುವಂತೆ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ತಿಮರೋಡಿ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

. Ad Widget .

ಮೇಲ್ಮನವಿಯನ್ನು ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿ, ಮೇಲ್ಮನವಿ ವಜಾಗೊಳಿಸಿ ಆದೇಶಿಸಿತು.

ಇದೇ ವೇಳೆ ಸರ್ಕಾರದ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸುವವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಆದರೆ, ಈ ಮನವಿಯನ್ನು ವಿಭಾಗೀಯ ನ್ಯಾಯಪೀಠ ತಳ್ಳಿಹಾಕಿತು.

Leave a Comment

Your email address will not be published. Required fields are marked *