ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

samagra job news : 3,395 ಪೊಲೀಸ್ ಕಾನ್‌ಸ್ಟೇಬಲ್ (Police Constable) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

Ad Widget ... .. Ad Widget .

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2,266 ಪುರುಷ, 755 ಮಹಿಳಾ, 257 ಸೇವಾನಿರತ ಪುರುಷ, 82 ಸೇವಾನಿರತ ಮಹಿಳಾ, 35 ತೃತೀಯಲಿಂಗ ಅಭ್ಯರ್ಥಿಗಳ ಹುದ್ದೆಗಳು ಖಾಲಿ ಇವೆ. ಜೂನ್ 8 ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸಲು ಜುಲೈ 3 ಕೊನೆ ದಿನ. ಶುಲ್ಕ ಪಾವತಿ ಮಾಡಲು ಜು.4 ಕೊನೆ ದಿನವಾಗಿದೆ.

Ad Widget

ವಯೋಮಿತಿ
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 33 ವರ್ಷ
* ಪರಿಶಿಷ್ಟ ಜಾತಿ/ ಪಂಗಡ/ ಪ್ರವರ್ಗ-1 ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 35 ವರ್ಷ
* ಬುಡಕಟ್ಟು ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ಇದೆ.

ಸೇವಾನಿರತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ವಯೋಮಿತಿ
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 38 ವರ್ಷ
* ಪರಿಶಿಷ್ಟ ಜಾತಿ/ ಪಂಗಡ/ ಪ್ರವರ್ಗ-1 ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಇದೆ.

Leave a Comment

Your email address will not be published. Required fields are marked *