ಕರ್ನಾಟಕ ಪ್ರವೇಶಿಸಿದ ಮುಂಗಾರು| ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಕೇರಳಕ್ಕೆ ಮುಂಗಾರು ಕಾಲಿಟ್ಟಿದ್ದು, ದೇಶಾದ್ಯಂತ ಮಳೆ ಚುರುಕು ಕಾಣುತ್ತಿದೆ. ಕರ್ನಾಟಕದಲ್ಲಿಯೂ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ವಾತಾವರಣ ಸೃಷ್ಟಿಯಾಗಿದೆ. ಇಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Ad Widget ... .. Ad Widget .

ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಬೀದರ್‌, ಕೊಪ್ಪಳ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವುದು. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಭಾರಿ ಗಾಳಿಯೊಂದಿಗೆ ವಿಪರತ ಮಳೆಯಾಗುವ ಸಾಧ್ಯತೆ ಇದೆ.

Ad Widget

ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಕೂಡ ಬಿರುಗಾಳಿ ಸಹಿತ ಮಳೆಯಾಗಲಿದೆ. ರಾಜ್ಯಾದ್ಯಂತ ಜೂ.11ರ ಹೊತ್ತಿಗೆ ಮಳೆ ಇನ್ನಷ್ಟು ಚುರುಕುಗೊಳ್ಳಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಜೂ.7ರಿಂದ ಮಳೆಯ ಅಬ್ಬರ ಹೆಚ್ಚುವುದಾಗಿ IMD ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *