ಸಮಗ್ರ ನ್ಯೂಸ್: ಎಐಸಿಸಿ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗನಾಗಿರುವ ಸೂರಜ್ ಹೆಗ್ಡೆ ಅವರು ರಾಜ್ಯ ಕಾಂಗ್ರೆಸ್ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದು, ಪಕ್ಷದ ವಿವಿಧ ಸಂಘಟನಾ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.
ಎಐಸಿಸಿ ಕಾರ್ಯದರ್ಶಿಗಳು ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
“ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ ಆಘಾತವಾಗಿದೆ. ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲೇ ಆಗುತ್ತಿಲ್ಲ. ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ತಿಳಿಸಿದ್ದಾರೆ.








