ಹವಾಮಾನ ವರದಿ| ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ| ಐದು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಿದೆ.

Ad Widget ... .. Ad Widget .

ಇಂದೂ ಸೇರಿದಂತೆ ಮೂರು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಪ್ರಕೃತಿ ವಿಕೋಪದ ಸಾಧ್ಯತೆ ಇರುವುದರಿಂದ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Ad Widget

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಸೂಚಿಸಲಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಇಲ್ಲೂ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ.

ಜೂ.9ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂ.10ರಿಂದ ಜೂ.14ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬಳ್ಳಾರಿ, ವಿಜಯನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಹೇಳಿದೆ.

Leave a Comment

Your email address will not be published. Required fields are marked *