ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಯಲ್ಲಿನ ದಿಢೀರ್ ಬೆಳವಣಿಗೆಗಳ ಪರಿಣಾಮವಾಗಿ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಜೂನ್ 10 ರ ಇಂದಿನ ಮಾರುಕಟ್ಟೆ ವರದಿಗಳ ಪ್ರಕಾರ, ಆಭರಣ ಖರೀದಿಸಲು ಕಾಯುತ್ತಿದ್ದವರಿಗೆ ಇದು ಅತ್ಯುತ್ತಮ ಸಮಯವಾಗಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಗಮನಾರ್ಹವಾಗಿ ಇಳಿಕೆಯಾಗಿದ್ದು, ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಎಂಸಿಎಕ್ಸ್ ಮಾರುಕಟ್ಟೆಯಲ್ಲಿನ ಏರಿಳಿತಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಮೌಲ್ಯ ಬಲಗೊಂಡಿರುವುದು ಈ ದಿಢೀರ್ ಬೆಲೆ ಇಳಿಕೆಗೆ ಪ್ರಮುಖ ಕಾರಣವಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಗಳ ಬಗ್ಗೆ ಬರುತ್ತಿರುವ ವರದಿಗಳು ಹೂಡಿಕೆದಾರರ ಮೇಲೆ ಪ್ರಭಾವ ಬೀರುತ್ತಿವೆ. ಹೀಗಾಗಿ, ಸುರಕ್ಷಿತ ಹೂಡಿಕೆಯಾಗಿ ಚಿನ್ನದ ಮೇಲಿನ ಅವಲಂಬನೆ ಕಡಿಮೆಯಾಗುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ಕುಸಿತವಾಗುತ್ತಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಿನ್ನೆಯ (ಜೂನ್ 9) ದರಕ್ಕೆ ಹೋಲಿಸಿದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಬಾರೀ ಇಳಿಕೆಯಾಗಿದೆ. ನಿನ್ನೆ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 14,040 ರೂಪಾಯಿ ಇತ್ತು, ಆದರೆ ಇಂದು ಅದು 13,645 ರೂಪಾಯಿಗೆ ಕುಸಿದಿದೆ (ಪ್ರತಿ ಗ್ರಾಂಗೆ 395 ರೂ. ಇಳಿಕೆ). ಅದೇ ರೀತಿ 24 ಕ್ಯಾರಟ್‌ನ 1 ಗ್ರಾಂ ಚಿನ್ನ ನಿನ್ನೆ 15,316 ರೂಪಾಯಿ ಇತ್ತು, ಇಂದು 14,886 ರೂಪಾಯಿಗೆ ಇಳಿಕೆಯಾಗಿದೆ (430 ರೂ. ಇಳಿಕೆ).

ಇನ್ನು ಬೆಳ್ಳಿಯ ವಿಚಾರಕ್ಕೆ ಬಂದರೆ, ನಿನ್ನೆ ಒಂದು ಕೆಜಿ ಬೆಳ್ಳಿಯ ಬೆಲೆ 2,59,900 ರೂಪಾಯಿ ಇತ್ತು. ಆದರೆ ಇಂದು ಬರೋಬ್ಬರಿ 9,900 ರೂಪಾಯಿ ಕುಸಿದು, 2,50,000 ರೂಪಾಯಿಗೆ ಮಾರಾಟವಾಗುತ್ತಿದೆ.

ಮುಂಬರುವ ದಿನಗಳಲ್ಲಿ ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರಗಳ ಕುರಿತು ತೆಗೆದುಕೊಳ್ಳುವ ನಿರ್ಧಾರಗಳು ಚಿನ್ನದ ಬೆಲೆಯ ಮುಂದಿನ ಹಾದಿಯನ್ನು ನಿರ್ಧರಿಸಲಿವೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ. ಇದು ಮಾರುಕಟ್ಟೆಯಲ್ಲಿನ ತಾತ್ಕಾಲಿಕ ತಿದ್ದುಪಡಿಯಾಗಿದ್ದು, ಗ್ರಾಹಕರಿಗೆ ಸ್ವಲ್ಪ ಮಟ್ಟಿನ ನಿರಾಳತೆ ಸಿಕ್ಕಂತಾಗಿದೆ.

Leave a Comment

Your email address will not be published. Required fields are marked *