ಅಸಮರ್ಥ ಸಚಿವ ಎಂಬ ಟೀಕೆಗೆ ಪ್ರಿಯಾಂಕ್ ಖರ್ಗೆ ಖಾರವಾದ ಉತ್ತರ| RSS ನೋಂದಣಿ ದಾಖಲೆ ರೆಡಿ ಮಾಡಿಟ್ಟುಕೊಳ್ಳಿ ಎಂದು ಕೆಣಕಿದ ಖರ್ಗೆ

ಸಮಗ್ರ ನ್ಯೂಸ್: ಗೃಹ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಕೇವಲ 48 ಗಂಟೆಗಳಲ್ಲೇ ಬಿಜೆಪಿ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ನೇರ ಹಣಾಹಣಿ ಶುರುವಾಗಿದೆ. ಗೃಹ ಇಲಾಖೆಯು ಒಬ್ಬ ಅಸಮರ್ಥ ಸಚಿವರ ಕೈಗೆ ಸಿಲುಕಿದೆ, ಇವರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಟ್ವೀಟ್ ಮೂಲಕ ಲೇವಡಿ ಮಾಡಿತ್ತು. ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ನಿಮ್ಮ ಆತಂಕ ಮತ್ತು ಭಯ ನನಗೆ ಅರ್ಥವಾಗುತ್ತಿದೆ. ಮೊದಲು ನಿಮ್ಮ ರಾಜಕೀಯ ಮೇಲಾಧಿಕಾರ ಹೊಂದಿರುವ ಆರ್‌ಎಸ್‌ಎಸ್ ಸಂಘಟನೆಯ ನೋಂದಣಿಗೆ ಬೇಕಾದ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಅವರಿಗೆ ತಿಳಿಸಿ ಎಂದು ತಿರುಗೇಟು ನೀಡಿದ್ದಾರೆ.

Ad Widget ... .. Ad Widget .

ಸಂಘಟನೆಯನ್ನು ನಿಷೇಧಿಸುವ ಬಗ್ಗೆ ನಾನು ಮಾತನಾಡುತ್ತಿಲ್ಲ, ಬದಲಾಗಿ ಆ ಸಂಘಟನೆಯ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಇರಬೇಕು ಎನ್ನುವುದು ನಮ್ಮ ಒತ್ತಾಯ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ. ನಿಮ್ಮ ಬಾಡಿ ಆಫ್ ಇಂಡಿವಿಜುವಲ್ಸ್ ಗೆ ನನ್ನ ನಮಸ್ಕಾರ ತಿಳಿಸಿ ಎನ್ನುವ ಮೂಲಕ ಆರ್‌ಎಸ್‌ಎಸ್ ಸಂಘಟನೆಯ ಕಾನೂನುಬದ್ಧ ಅಸ್ತಿತ್ವದ ಬಗ್ಗೆ ಪರೋಕ್ಷವಾಗಿ ಪ್ರಶ್ನೆ ಎತ್ತಿದ್ದಾರೆ. ಈ ಹೇಳಿಕೆಯು ಈಗ ಕೇಸರಿ ಪಾಳೆಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಬಗ್ಗೆ ಹಗುರವಾಗಿ ಮಾತನಾಡಿ ತಮ್ಮ ಘನತೆಯನ್ನು ತಾವೇ ಕಳೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದೆ. ಬಿಜೆಪಿ ಇಂತಹ ಪೊಳ್ಳು ಬೆದರಿಕೆಗಳಿಗೆ ಹೆದರುವ ಪಕ್ಷವಲ್ಲ. ಹತ್ತಾರು ಸವಾಲುಗಳನ್ನು ಎದುರಿಸಿ ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ. ನರೇಂದ್ರ ಮೋದಿ ಅವರಂತಹ ವಿಶ್ವನಾಯಕರನ್ನು ಹೊಂದಿರುವ ಪಕ್ಷಕ್ಕೆ ಇಂತಹ ಬೆದರಿಕೆಗಳು ಹೊಸತಲ್ಲ ಎಂದು ಬಿಜೆಪಿ ತಿರುಗೇಟು ನೀಡಿದೆ.

Leave a Comment

Your email address will not be published. Required fields are marked *