ಕಡಬ: ಆಲಂಕಾರಿನಲ್ಲಿ ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ| ಹೆಣಗಳ ನಡುವೆ ಅತ್ತೂ ಅತ್ತು ನಿದ್ದೆಗೆ ಜಾರಿದ ಕಂದಮ್ಮ!!

ಸಮಗ್ರ ನ್ಯೂಸ್: ಪತ್ನಿಯನ್ನು ಕೊಂದು ಪತಿ‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಅಪರಾಹ್ನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು ಎಂಬಲ್ಲಿ ನಡೆದಿದೆ.

. Ad Widget . Ad Widget . Ad Widget .

ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಮೂಲತಃ ಕಾರ್ಕಳ ಬಜಗೋಳಿ ನಿವಾಸಿ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತಾ ದಂಪತಿಯು ಆಲಂಕಾರು ಕಜೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಶನಿವಾರದಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ದಂಪತಿಗೆ ಎರಡು ವರ್ಷದ ಹೆಣ್ಣು ಮಗುವೊಂದಿದೆ. ಒಂದು ತಿಂಗಳ ಹಿಂದಷ್ಟೇ ಆಲಂಕಾರಿನಲ್ಲಿ ನಡೆಸುತ್ತಿದ್ದ ಹೋಟೆಲನ್ನು ಬಿಟ್ಟು ತೆರಳಿದ್ದ ಇವರು ಶುಕ್ರವಾರದಂದು ಅಲಂಕಾರಿನ ಕಜೆಯ ಬಾಡಿಗೆ ಮನೆಗೆ ಪುನಃ ಬಂದಿದ್ದರು. ಜೂ.20ರಂದು ಘಟನೆ ನಡೆದಿದ್ದು, ಮನೆಯ ಒಳಗಿನ ಚಿಲಕ ಹಾಕಲಾಗಿತ್ತು. ಅಪ್ಪ – ಅಮ್ಮನ ಮೃತ ಶರೀರದ ಜೊತೆಗೆ ಮಗು ಅನಾಥವಾಗಿರುವ ದೃಶ್ಯ ಮನಕಲಕುವಂತಿತ್ತು.

ಸ್ಥಳಕ್ಕೆ ಕಡಬ ಪೊಲೀಸ್ ಉಪನಿರೀಕ್ಷಕ ಜಂಬೂರಾಜ್ ಮಹಾಜನ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *